ಬೀದರ – ಬೀದರ ನಲ್ಲಿ ಅನೈತಿಕ ಗಾಂಜಾ ಚಟುವಟಿಕೆ ಮಾಡುವವರಿಗೆ ಬೀದರ ಎಸ್ ಪಿ ಪ್ರದೀಪ್ ಗುಂಟೆ ಹೆಡೆಮುರಿ ಕಟ್ಟಿದ್ದಾರೆ.
ಬೀದರ್ ಗಾಂಧಿ ಗಂಜ್ ಪೊಲೀಸರು ಭರ್ಜರಿ ಕಾರ್ಯಾಚರಣೆಯಲ್ಲಿ ಗಾಂಜಾ ಅಡ್ಡೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ೩೮ ಕೆಜಿ ಗಾಂಜಾ ವಶಪಡಿಸಿಕೊಂಡು, ಓರ್ವ ಮಹಿಳೆ ಬಂಧಿಸಿದ್ದಾರೆ.
19 ಲಕ್ಷ 23 ಸಾವಿರದಷ್ಟು ಬೆಲೆ ಬಾಳುವ 38 ಕೆಜಿ 476 ಗ್ರಾಂನಷ್ಟು ಗಾಂಜಾ ವಶಕ್ಕೆ ಪಡೆದ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಇಬ್ಬರ ಮೇಲೆ NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಓರ್ವ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು
ಬೀದರ್ ಎಸ್‌ಪಿ ಪ್ರದೀಪ್ ಗುಂಟೆಯವರ ಸಮರ್ಥ ಮಾರ್ಗದರ್ಶನದಲ್ಲಿ ನಡೆದ ಪೊಲೀಸರ ದಾಳಿಗೆ ಎಲ್ಲೆಡೆ ಸಾರ್ವಜನಿಕರಿಂದ ಪ್ರಶಸ್ತಿ ವ್ಯಕ್ತವಾಗಿದೆ.
ವರದಿ : ನಂದಕುಮಾರ ಕರಂಜೆ, ಬೀದರ