ಸಿಂದಗಿ: ಸದ್ಯದ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಡಿಕೆ ಶಿವಕುಮಾರ್ ಈಗ ಮುಖ್ಯಮಂತ್ರಿಯಾಗಿದ್ದಾರೆ ಅದೇ ರೀತಿಯಾಗಿ ಮಂತ್ರಿಮಂಡಲ ವಿಸ್ತಾರವಾದರೆ ಉಪ ಮುಖ್ಯಮಂತ್ರಿಗಳ ಸ್ಥಾನಗಳು ಭರ್ತಿಯಾಗಲಿವೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಒಂದೊಮ್ಮೆ ಉಪ ಮುಖ್ಯಮಂತ್ರಿಗಳ ಸ್ಥಾನ ನೀಡುವುದೇ ಆದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಆದ್ಯತೆ ಕೊಡಬೇಕು ಎಂದು ಸಿಂದಗಿ ಪುರಸಭೆಯ ಮಾಜಿ ಅಧ್ಯಕ್ಷ ಶಾಂತವೀರ ಬಿರಾದಾರ ಆಗ್ರಹಿಸಿದ್ದಾರೆ
- ಅದರಲ್ಲೂ ವಿಶೇಷವಾಗಿ ಹಲವಾರು ಬಾರಿ ಶಾಸಕರಾಗಿ, ವಿವಿಧ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಸೈ ಎನಿಸಿಕೊಂಡದ್ದಲ್ಲದೆ ಸಜ್ಜನ ರಾಜಕಾರಣಿ ಎಂದೇ ಪ್ರಚಲಿತವಾಗಿರುವ, ಸದ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರು, ಜವಳಿ ಮತ್ತು ಸಕ್ಕರೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಬಸವನ ಬಾಗೇವಾಡಿ ಕ್ಷೇತ್ರದ ಶಿವಾನಂದ ಪಾಟೀಲರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿ ಪ್ರಬಲ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆದ್ಯತೆ ನೀಡಬೇಕೆಂದು ಸಿಂದಗಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಶಾಂತವೀರ ಬಿರಾದಾರ ಸರಕಾರವನ್ನು ಆಗ್ರಹಿಸಿದ್ದಾರೆ.