Homeಸುದ್ದಿಗಳುಬೆಳಗಾವಿ ಜಿಲ್ಲಾ ಕಸಾಪದಿಂದ ಅಭಿನಂದನಾ ಸಮಾರಂಭ

ಬೆಳಗಾವಿ ಜಿಲ್ಲಾ ಕಸಾಪದಿಂದ ಅಭಿನಂದನಾ ಸಮಾರಂಭ

Published on

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ದಿ. ೧೮ ರಂದು ರವಿವಾರ ಅಭಿನಂದನಾ ಸಮಾರಂಭವು ಬೆಳಗಾವಿ ನೆಹರೂ ನಗರದ ಕನ್ನಡ ಭವನದಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಕೆಎಲ್ಇ ಸಂಸ್ಥೆಯ ಕುಲಪತಿ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ವಹಿಸಲಿದ್ದಾರೆ.

ಸಮಾರಂಭದ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಸರಜೂ ಕಾಟಕರ ಆಗಮಿಸಲಿದ್ದು ಅತಿಥಿಗಳಾಗಿ ಖ್ಯಾತ ವೈದ್ಯರಾದ ಬಿ ಎಚ್ ಮೆಟಗುಡ್ಡ, ಸ್ತ್ರೀರೋಗ ತಜ್ಞೆ ಡಾ. ವನಿತಾ ಮೆಟಗುಡ್ಡ ಹಾಗೂ ಐತಿಹಾಸಿಕ ಕಾದಂಬರಿಕಾರ ಯ ರು ಪಾಟೀಲ ಆಗಮಿಸಲಿದ್ದಾರೆ.

ಸಮಾರಂಭದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಸಾಪ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪತ್ರಕರ್ತರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಕಟಣೆ ತಿಳಿಸಿದೆ.

Latest articles

More like this