ಮೂಡಲಗಿ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಲಿರುವ ಸರ್ಕಾರದಲ್ಲಿ ಜನಪ್ರಿಯ ನಾಯಕ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜೊತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಸ್ಥಾನವನ್ನು ನೀಡಬೇಕು ಎಂದು ಕಾಂಗ್ರೆಸ್ ಯುವ ಧುರೀಣ ಸಾಕೀಬ ಪೀರಜಾದೆ ಒತ್ತಾಯಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಬಲ ಅಹಿಂದ ನಾಯಕರಾಗಿ ಗುರುತಿಸಿಕೊಂಡಿರುವ ಹಾಗೂ ಅಪಾರ ಜನಪ್ರಿಯತೆ ಪಡೆದಿರುವ ಸತೀಶ ಜಾರಕಿಹೊಳಿ ಅವರು ಅತ್ಯಂತ ಅನುಭವಿ ರಾಜಕಾರಣಿ ಆಗಿದ್ದು ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ಇವರದಾಗಿದ್ದು ಇವರಿಗೆ ಸೂಕ್ತ ಸ್ಥಾನಮಾನ ನೀಡಿದರೆ ಪಕ್ಷ ಸಂಘಟನೆಗೆ ಕಾರ್ಯಕರ್ತರಲ್ಲಿ ಆನೆ ಬಲ ಬಂದಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಮಿಉಲ್ಲಾ ಮಲ್ಲಾಪೂರ, ವಾಹೀದ ಇನಾಮದಾರ, ಸಾಜೀದ ಪೀರಜಾದೆ, ಸದ್ದಾಂ ಡಾಂಗೆ ಇದ್ದರು.