ಬೆಟಗೇರಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಬೆಳಗಾವಿ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಗುರುತಿಸಿ ಸತತ ೨ನೇ ಭಾರಿಗೆ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ.
ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್., ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಬೆಳಗಾವಿ ಜಿಲ್ಲಾ ಇತರೆ ಸಹಕಾರ ಸಂಘಗಳು, ಬ್ಯಾಂಕುಗಳು, ಸೌಹಾರ್ದ ಸಹಕಾರಿಗಳು ಸಹಯೋಗದಲ್ಲಿ ನ.೧೬ರಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ೭೩ನೇ ಸಹಕಾರ ಸಪ್ತಾಹ ಆಚರಣೆ-೨೦೨೬ ನೇ ಸಾಲಿನ ಸಮಾರಂಭದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಸಿದ್ಧೇಶ್ವರ ಕುರಬೇಟ ಮತ್ತು ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ಅವರಿಗೆ ಬೆಳಗಾವಿ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಪ್ರಥಮ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಈ ವೇಳೆ ಸ್ಥಳೀಯ ಸಂಘದ ಅಧ್ಯಕ್ಷ ಸಿದ್ಧೇಶ್ವರ ಕುರಬೇಟ, ಸದಸ್ಯ ಸತ್ತೆಪ್ಪ ಹೊರಟ್ಟಿ, ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಹಾಗೂ ಬೆಳಗಾವಿ ಜಿಲ್ಲಾ ಇತರೆ ಸಹಕಾರ ಸಂಘಗಳು, ಬ್ಯಾಂಕುಗಳು, ಸೌಹಾರ್ದ ಸಹಕಾರಿಗಳ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗ, ವಿವಿಧ ತಾಲೂಕಾ ಮಟ್ಟದ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಹಕಾರಿ ಧುರೀಣರು, ಗಣ್ಯರು, ಮತ್ತಿತರರು ಇದ್ದರು.