ಸಭೆಯ ನಂತರ 2026–27ನೇ ಸಾಲಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಚುನಾವಣೆಯು ಚುನಾವಣಾಧಿಕಾರಿ ಬಾಬು ಜಿ.ಎಸ್. ಅವರ ಸಮ್ಮುಖದಲ್ಲಿ ಮತದಾನದ ಮೂಲಕ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಬಿ.ಕೆ. ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಪ್ರದೀಪ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಹ ಕಾರ್ಯದರ್ಶಿಯಾಗಿ ಸುಧೀರ್ ಹೆಬ್ಬಾರ್ ಹಾಗೂ ಖಜಾಂಚಿಯಾಗಿ ಪ್ರಸನ್ನ ಕುಲಕರ್ಣಿ ಅವರು ಆಯ್ಕೆಯಾದರು.
ಸಂಘದ ನಿರ್ದೇಶಕರಾಗಿ ಆರ್.ಜಿ. ಭಟ್, ಪ್ರಸನ್ನ ಎನ್.ಎಸ್., ಕಾಶಿ ಸುಬ್ರಮಣ್ಯ, ಚಂದ್ರಶೇಖರ ಎಸ್.ಆರ್., ಜೂಪಿಟರ್ ಮಂಜುನಾಥ್, ರಮೇಶ್ ಭಟ್, ಸತ್ಯಪ್ರಕಾಶ್, ರಾಘವೇಂದ್ರ ರಾವ್, ಶ್ರೀನಿವಾಸ್ ವೈ.ಕೆ., ಆರ್. ಕೃಷ್ಣ ಹಾಗೂ ಲಕ್ಷ್ಮಿಕಾಂತ್ ಆರ್. ಅವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳ ವಿಪ್ರ ಛಾಯಾಗ್ರಾಹಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್. ರಘುನಾಥ್ ಅವರು ಪ್ರಶಸ್ತಿಗಳನ್ನು ವಿತರಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಛಾಯಾಗ್ರಾಹಕರ ಸಂಘಟನೆ ಮತ್ತು ಮಹಾಸಭೆಯ ನಡುವೆ ದೀರ್ಘಕಾಲದ ಆತ್ಮೀಯ ಸಂಬಂಧವಿದ್ದು, ಸಂಘದ ಚಟುವಟಿಕೆಗಳಿಗೆ ಮಹಾಸಭೆ ನಿರಂತರವಾಗಿ ಸಹಕಾರ ನೀಡುತ್ತಾ ಬಂದಿದೆ. ಮುಂದೆಯೂ ಎಲ್ಲ ರೀತಿಯ ಬೆಂಬಲ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ನೂತನ ಅಧ್ಯಕ್ಷರಾದ ರಮೇಶ್ ಬಿ.ಕೆ. ಅವರು ಮಾತನಾಡಿ, ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಿಪ್ರ ಛಾಯಾಗ್ರಾಹಕರು ಹಾಗೂ ವೀಡಿಯೋಗ್ರಾಫರ್ಸ್‌ಗಳು ಸಂಘದ ಸದಸ್ಯರಾಗಿ ಸೇರ್ಪಡೆಗೊಂಡು ಸಂಘಟನೆಯ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಂಘಟನೆಯ ಮೂಲಕ ವೃತ್ತಿಪರರ ಹಿತಾಸಕ್ತಿ ಕಾಪಾಡುವ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಛಾಯಾಗ್ರಾಹಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.