ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಕಡಾಡಿಯವರನ್ನು ಸತ್ಕರಿಸಿ ಗೌರವಿಸಿದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷ ಜಯಕುಮಾರ ಖೋತ
ನಿಪ್ಪಾಣಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆಯವರ ನೇತೃತ್ವದಲ್ಲಿ ಇಲ್ಲಿನ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಸೋಮವಾರದಂದು ನಡೆದಿದ್ದು, ನೂತನ ಅಧ್ಯಕ್ಷರಾಗಿ ಜಯಕುಮಾರ ಖೋತ ಮತ್ತು ಉಪಾಧ್ಯಕ್ಷರಾಗಿ ಗೀತಾ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಜೊಲ್ಲೆಯವರ ಫಾರ್ಮ ಹೌಸನಲ್ಲಿ ನಡೆದ ಔಪಚಾರಿಕ ಸಭೆಯಲ್ಲಿ ಕಾರ್ಖಾನೆಯ ಅಧ್ಯಕ್ಷ- ಉಪಾಧ್ಯಕ್ಷರು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ರಾಜ್ಯಸಭಾ ಸದಸ್ಯ ಈರಪ್ಪ ಕಡಾಡಿಯವರನ್ನು ಸತ್ಕರಿಸಿ, ಗೌರವಿಸಿದರು.
ನೂತನವಾಗಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಖೋತ ಮತ್ತು ಪಾಟೀಲ ಅವರನ್ನು ಅಭಿನಂದಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಕಡಾಡಿಯವರು ಶುಭ ಕೋರಿದರು.
ಶಾಸಕಿ ಶಶಿಕಲಾ ಜೊಲ್ಲೆ, ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಜಯಕುಮಾರ ಖೋತ, ಉಪಾಧ್ಯಕ್ಷೆ ಗೀತಾ ಪಾಟೀಲ, ಗಣ್ಯ ಉದ್ಯಮಿಗಳಾದ ಜೆ.ಎನ್.ಶೆಟ್ಟಿ, ಸೈದಪ್ಪ ಗದಾಡಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.