Homeಸುದ್ದಿಗಳುಕಾಂಗ್ರೆಸ್ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ - ಬಿ ವೈ ವಿಜಯೇಂದ್ರ

ಕಾಂಗ್ರೆಸ್ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ – ಬಿ ವೈ ವಿಜಯೇಂದ್ರ

Published on

ಬೀದರ – ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಹೀಗಾಗಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುವುದು ಖಚಿತ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬೀದರನ ಚಾಂಗ್ಲೇರಾದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ಎರಡೂ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿದ್ದು ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂದರು.

ಶಾಮನೂರು ಅವರ ಋಣ ತೀರಿಸಲು ದಾವಣಗೆರೆಯಲ್ಲ ಡಮ್ಮಿ ಅಭ್ಯರ್ಥಿ ಹಾಕಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಯಾರೋ ಮೂರ್ಖರು ಹಾಗೆ ಹೇಳಿದ್ದಾರೆ ಅದಕ್ಕೆಲ್ಲ ಉತ್ತರ ಕೊಡುವುದಕ್ಕೆ ಆಗೋದಿಲ್ಲ. ಚಟಕ್ಕಾಗಿ ಚಪಲಕ್ಕಾಗಿ ಮಾತನಾಡುವುದು ಬೇರೆ. ಭಗವಂತ ಯತ್ನಾಳ ಅವರಿಗೆ ಒಳ್ಳೆಯದು ಮಾಡಲಿ ಎಂದರು.

ಬಾಗಲಕೋಟೆಗೆ ಹಿರಿಯರಾದ ಚರಂತಿಮಠ ಹಾಗೂ ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸ ಕರಿಯಪ್ಪ ಅವರನ್ನು ನಮ್ಮ ಪಕ್ಷದ ಹಾಗೂ ಜೆಡಿಎಸ್ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿಯೇ ಕಣಕ್ಕೆ ಇಳಿಸಲಾಗಿದೆ ಎಂದ ಅವರು, ಅಧಿವೇಶನದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿಯವರು ಪ್ರಚಾರಕ್ಕೆ ಸಮಯ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ವಿಜಯೇಂದ್ರ ಹೇಳಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest articles

More like this