Homeಸುದ್ದಿಗಳುಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ರವಿ ಹಂಜ ಹಾಗೂ ವಿಶ್ವವಾಣಿ ಸಂಪಾದಕರ ದೂರು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ರವಿ ಹಂಜ ಹಾಗೂ ವಿಶ್ವವಾಣಿ ಸಂಪಾದಕರ ದೂರು.

Published on

ಇವರ ವಿರುದ್ಧ ಕ್ರಮಕ್ಕೆ ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ ಆಗ್ರಹ

ಪುಣೆ / ಬೆಂಗಳೂರು: ಲಿಂಗಾಯತ ಧಾರ್ಮಿಕ ನಂಬಿಕೆಗಳು ಹಾಗೂ ಬಸವ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿ ಲೇಖನಗಳನ್ನು ಪ್ರಕಟಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಹದಗೆಡಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪುಣೆಯ ‘ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ’ (Basava Understanding & Research Centre, Pune) ಕರ್ನಾಟಕ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (DGP) ಮನವಿ ಸಲ್ಲಿಸಿದೆ.

ಕೇಂದ್ರದ ಅಧ್ಯಕ್ಷರಾದ ಡಾ. ಶಶಿಕಾಂತ ಆರ್. ಪಟ್ಟಣ ಅವರು ಈ ಕುರಿತು ಅಧಿಕೃತ ದೂರು ಸಲ್ಲಿಸಿದ್ದು, ಕಳೆದ ಕೆಲವು ವರ್ಷಗಳಿಂದ ಲೇಖಕ ರವಿ ಹಂಜ ಅವರು ವಿಶ್ವೇಶ್ವರ ಭಟ್ ಅವರ ಸಂಪಾದಕತ್ವದ ‘ವಿಶ್ವವಾಣಿ’ ದಿನಪತ್ರಿಕೆ, ವಿಶ್ವವಾಣಿ ಟಿವಿ ಹಾಗೂ ಯೂಟ್ಯೂಬ್ ಚಾನೆಲ್‌ಗಳ ಮೂಲಕ ಲಿಂಗಾಯತ ಧರ್ಮೀಯರ ನಂಬಿಕೆ ಮತ್ತು ಶ್ರದ್ಧೆಗೆ ಧಕ್ಕೆ ತರುವಂತಹ ಅವೈಜ್ಞಾನಿಕ ಹಾಗೂ ಅತಾರ್ಕಿಕ ಲೇಖನಗಳನ್ನು ನಿರಂತರವಾಗಿ ಪ್ರಕಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಕರ್ನಾಟಕ ಸರ್ಕಾರವು ಈಗಾಗಲೇ ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಅಧಿಕೃತವಾಗಿ ಘೋಷಿಸಿದೆ. ಹೀಗಿದ್ದರೂ, ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮೂಲಕ ಬಸವ ಭಕ್ತರ ಹಾಗೂ ಲಿಂಗಾಯತ ಧರ್ಮೀಯರ ಭಾವನೆಗಳನ್ನು ಕೆರಳಿಸಿ, ಮನಸ್ಸಿಗೆ ನೋವುಂಟು ಮಾಡುವ ಪ್ರಯತ್ನ ನಡೆಯುತ್ತಿದೆ. ಆದ್ದರಿಂದ ತಕ್ಷಣವೇ ರವಿ ಹಂಜ ಹಾಗೂ ವಿಶ್ವವಾಣಿ ಸಮೂಹದ ಸಂಪಾದಕರಾದ ವಿಶ್ವೇಶ್ವರ ಭಟ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು” ಎಂದು ಡಾ. ಶಶಿಕಾಂತ ಪಟ್ಟಣ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ. ಗಾಣಿಗೇರ, ಖಜಾಂಚಿ ಡಾ. ಎ.ವಿ. ಅರಕೇರಿ, ಡಾ ಜಯಶ್ರೀ ಪಟ್ಟಣ ಸಂಘಟನಾ ಕಾರ್ಯದರ್ಶಿ ಡಾ. ಉಮಾಕಾಂತ ಬಿ. ಶೇಟ್ಕರ್ ಪ್ರೊ ಶಾರದಮ್ಮ ಪಾಟೀಲ ಡಾ ಸರಸ್ವತಿ ಪಾಟೀಲ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಈ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Latest articles

More like this