ಮೂಡಲಗಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ ೨೦೨೬-೨೭ನೇಸಾಲಿನ ‘ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳನ್ನು” ಸೆ.೧೦ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.೧೦ರಂದು ಬೆಳಿಗ್ಗೆ ೯.೦೦ ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ ದುರದುಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ :
ಅಥ್ಲೆಟಿಕ್ಸ್ (ಪುಷರಿಗಾಗಿ) : ೧೦೦ಮೀ, ೨೦೦ಮೀ, ೪೦೦ಮೀ, ೮೦೦ಮೀ, ೧೫೦೦ಮೀ, ೫೦೦೦ಮೀ, ೧೦,೦೦೦ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ , ಡಿಸ್ಕಸ್ ಥ್ರೋ, ೧೧೦ಮೀ ಹರ್ಡಲ್ಸ್, ೪*೧೦೦ ರಿಲೇ, ೪*೪೦೦ ರಿಲೇ,
ಅಥ್ಲೆಟಿಕ್ಸ್ (ಮಹಿಳೆಯರಿಗಾಗಿ) : ೧೦೦ಮೀ, ೨೦೦ಮೀ, ೪೦೦ಮೀ, ೮೦೦ಮೀ, ೧೫೦೦ಮೀ, ೩೦೦೦ ಮೀ ಓಟ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, ೪*೧೦೦ ರಿಲೇ, ೪*೪೦೦ ರಿಲೇ,
ಗುಂಪು ಆಟಗಳು : ವಾಲಿಬಾಲ್, ಪುಟ ಬಾಲ್, ಖೋಖೋ, ಕಬಡ್ಡಿ, ಥ್ರೋ ಬಾಲ್ , ಯೋಗ (ಪುರುಷ ಮತ್ತು ಮಹಿಳೆಯರಿಗಾಗಿ).
ನಿಯಮಗಳು : ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಮೂಡಲಗಿ ತಾಲೂಕಿನ ರಹವಾಸಿಯಾಗಿರಬೇಕು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿ ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಭಾಗವಹಿಸಬಹುದು. ಕ್ರೀಡಾಪಟುಗಳು ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿದಲ್ಲಿ ಅಂತವರ ಆಯ್ಕೆಯನ್ನು ರದ್ದುಗೊಳಿಸಲಾಗುವುದು. ಗುಂಪು ಸ್ಪರ್ಧೆಗಳಲ್ಲಿ ಸಂಪೂರ್ಣ ತಂಡವನ್ನು ರದ್ದುಗೊಳಿಸಲಾಗುವುದು. ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು. ಭಾಗವಹಿಸುವ ಕ್ರೀಡಾಪಟುಗಳಿಗೆ ಇಲಾಖೆಯ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜೂಡೋ ತರಬೇತಿದಾರ ರೋಹಿಣಿ ಪಾಟೀಲ ಮೋ, ೮೬೧೮೧೬೯೦೦೩ಗೆ ಅಥವಾ ೮೬೧೮೮೫೧೧೨೧ ಸಂಪರ್ಕಿಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ