ಬಾಗಲಕೋಟೆ ಜಿಲ್ಲೆಯ ಹಿರಿಯ ಲಿಂಗಾಯತ ನಾಯಕರು ಹಾಗೂ ಮಾಜಿ ಸಚಿವರಾದ ಎಸ್ ಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯ ಬಾಗಲಕೋಟೆ ಹಾಗೂ ವಿಜಯಪುರ ಅವಳಿ ಜಿಲ್ಲೆಯ ಜನತೆಯ ಪರವಾಗಿ ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಮಾಜಿ ಜಿಲ್ಲಾ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಾಸುರಾಜ ಅ ಭಾವಿ ಒತ್ತಾಯ ಮಾಡಿದರು
ಎಸ್ ಆರ್ ಪಾಟೀಲ್ ಕಳೆದ ಮೂರು ದಶಕಗಳ ಕಾಲ ಅವಳಿ ಜಿಲ್ಲೆಯ ರೖತರ ಕಾರ್ಮಿಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಐಟಿಬಿಟಿ ಸಚಿವರಾಗಿ ಹಲವಾರು ಬದಲಾವಣೆ ತಂದಿದ್ದಾರೆ ಉತ್ತರ ಕರ್ನಾಟಕದ ಜೀವನಾಡಿಗಳಾದ ಕೃಷ್ಣ ಮಹದಾಯಿ ನವಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಸದನದಲ್ಲಿ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ ಪಕ್ಷ ನೀಡಿದ ಹಲವಾರು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಇವರ ಸುದೀರ್ಘ ಆಡಳಿತ ಅನುಭವ ಹಾಗೂ ಪಕ್ಷ ಸಂಘಟನಾ ಸಾಮರ್ಥ ಹೊಂದಿದ್ದಾರೆ ಎಂದು ವಾಸುರಾಜ ಭಾವಿ ಹೇಳಿದರು
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ದೃಷ್ಟಿಯಿಂದ ಹಾಗೂ ಪ್ರಾದೇಶಿಕ ಪ್ರತಿನಿಧಿತ್ವವನ್ನು ಬಲಪಡಿಸುವ ಉದ್ದೇಶದಿಂದ ಎಸ್ ಆರ್ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ಕೈಗೊಂಡು ಉತ್ತರ ಕರ್ನಾಟಕದ ಜನರ ಆಸೆ ಈಡೇರಿಸಬೇಕು ಎಂದು ವಾಸುರಾಜ ಅ ಭಾವಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಎಸ್ ಆರ್ ಪಾಟೀಲ್ ಅವರು ಆವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತಗೆ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದು ಶಿಕ್ಷಣ ಆರೋಗ್ಯ ನೀರಾವರಿ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಯೋಜನೆಗಳಿಗೆ ಹೆಚ್ಚಿನ ಗಮನ ಹರಿಸಿದ್ದಾರೆ ಎಂದರು